Saturday, April 19, 2025
Google search engine

Homeರಾಜ್ಯಸುದ್ದಿಜಾಲಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಾರಂಭ: ಡಾ. ಅವಿನಾಶ್ ಮೆನನ್ ರಾಜೇಂದ್ರನ್

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಾರಂಭ: ಡಾ. ಅವಿನಾಶ್ ಮೆನನ್ ರಾಜೇಂದ್ರನ್

ರಾಮನಗರ, ಜು. ೧೯ :ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಯ ನೋಂದಣಿ ಜು. ೧೯ರಿಂದ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದ್ದಾರೆ.
ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರು ಸಹ ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರತಕ್ಕದ್ದಲ್ಲ.
ಫಲಾನುಭವಿಯು ನೋಂದಣಿಯನ್ನು ೨ ವಿಧಾನದಿಂದ ಮಾಡಿಸಬಹುದಾಗಿದೆ: ಮೊದಲನೆಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್‌ಎಂಎಸ್ ಮೂಲಕ ತಿಳಿಸಲಾಗುವುದು.
ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರವಾಗಿರುತ್ತದೆ.
ಪರ್ಯಾಯವಾಗಿ ಪ್ರಜಾಪ್ರತಿನಿಧಿ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೋಂದಾಯಿಸಿಕೊಳ್ಳಬಹುದು. ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು ೧೯೦೨ಗೆ ಕಾಲ್ ಮಾಡಿ ಅಥವಾ ೮೧೪೭೫೦೦೫೦೦ ನಂಬರ್‌ಗೆ ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿಕೇಂದ್ರ, ಕರ್ನಾಟಕ-ಒನ್, ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದ0ದು ಸಂಜೆ ೫ ರಿಂದ ೭ ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್‌ಬುಕ್ (ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದ್ದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ. ನೊಂದಣಿ ನಿಗದಿಪಿಡಿದ ದಿನಾಂಕದ0ದು ಈ ಎಲ್ಲಾ ಮಾಹಿತಿಗಳೊಂದಿಗೆ ಫಲಾನುಭವಿಗಳು ಕೇಂದ್ರಕ್ಕೆ ಹಾಜರಾಗುವುದು.
ಗ್ರಾಮ-ಒನ್, ಬಾಪೂಜಿಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊoಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊoಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು.
ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ-ಒನ್, ಬಾಪೂಜಿಕೇಂದ್ರ, ಕರ್ನಾಟಕ-ಒನ್, ಬೆಂಗಳೂರು-ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊoಡಲ್ಲಿ, ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು.
ಒಂದು ವೇಳೆ ಫಲಾಭವಿಯು ಗ್ರಾಮ-ಒನ್, ಬಾಪೂಜಿಕೇಂದ್ರ, ಕರ್ನಾಟಕ-ಒನ್, ಬೆಂಗಳೂರು-ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊ0ಡಿದ್ದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೋಂದಾಯಿಸಲು ಪ್ರಯತ್ನಿಸಿದರೆ ಈಗಾಗಲೇ ನೋಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ.
ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭಿವಿಯ ಖಾತೆಗೆ ಮಾಹೆಯಾನ ೨೦೦೦ ರೂ.ಗಳನ್ನು ಡಿ.ಬಿ.ಟಿ ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಛಿಸಿದ್ದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್ ಖಾತೆಗೆ ಮಾಹೆಯಾನ ೨೦೦೦ ರೂ.ಗಳನ್ನು ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುವುದು.
ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸಕ್ಕದ್ದಲ್ಲ. ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿರುತ್ತದೆ.
ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ, ಸಮಯಕ್ಕೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ, ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ರಾಮನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಾರಾಯಣಸ್ವಾಮಿ ಎನ್ ಮೊ.ನಂ. ೯೪೮೧೩೫೫೪೪೭, ರಾಮನಗರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾಂತರಾಜು ಮೊ.ನಂ. ೭೨೫೯೧೨೪೫೪೩, ೭೮೯೯೧೪೩೪೧೩, ಚನ್ನಪಟ್ಟಣ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೇಣುಗೋಪಾಲ್ ಮೊ.ನಂ. ೭೮೯೨೯೩೩೦೦೧, ೮೮೬೧೫೦೪೨೮೯ ಮಾಗಡಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ ಬಿ.ಎಲ್ ಮೊ.ನಂ. ೯೯೭೨೫೧೦೨೬೬, ೯೯೦೦೬೮೨೯೩೪, ಕನಕಪುರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾಂತರಾಜು ಮೊ.ನಂ. ೭೨೫೯೧೨೪೫೪೩, ೯೭೩೧೪೩೭೬೧೭ ಅಥವಾ ಹಾರೋಹಳ್ಳಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೇಣುಗೋಪಾಲ್ ಮೊ.ನಂ. ೭೮೯೨೯೩೩೦೦೧, ೮೬೬೦೭೫೯೪೮೪ ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular