Friday, April 4, 2025
Google search engine

Homeರಾಜ್ಯಸುದ್ದಿಜಾಲಕುಕ್ಕೆ, ಧರ್ಮಸ್ಥಳ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಕುಕ್ಕೆ, ಧರ್ಮಸ್ಥಳ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ನಿಗದಿಪಡಿಸಿದ ದಾಖಲೆಗಳೊಂದಿಗೆ ಫೆ.20ರ ಒಳಗೆ ಸಲ್ಲಿಸಬಹುದು.

ಮಾ.24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ವೃಷಭ ಲಗ್ನದಲ್ಲಿ ವಿವಾಹ ನೆರವೇರಲಿದೆ. ಫೆ.24ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಫೆ.28 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ, ಮಾ.5ರಂದು ವಧು-ವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಅಗತ್ಯ ದಾಖಲೆಗಳು: ವಧು-ವರರು ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅಥವಾ ಗ್ರಾಮ ಆಡಳಿತಾಧಿಕಾರಿಯಿಂದ ಅಥವಾ ತಹಶೀಲ್ದಾರರಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 03-05-2025 ಶನಿವಾರದಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಏಪ್ರಿಲ್‌ 25ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು, ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular