ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸಾಲಿಗ್ರಾಮ ತಾಲ್ಲೂಕಿನ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಂದ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕು ಉಪ್ಪಾರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಕರೆಯಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹರದನಹಳ್ಳಿ ಟಿ.ಸಂದೀಪ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ 2024ನೇ ವಾರ್ಷಿಕ ಪರೀಕ್ಷೆಯಲ್ಲಿ ಶೇ. 80ಕ್ಕಿಂತ ಹೆಚ್ಚಿನ ಅಂಕಗಳಿಸಿರುವ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲ್ಲೂಕುಗಳ ಉಪ್ಪಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಜ.5ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯೊಂದಿಗೆ ತಮ್ಮ ಅಂಕಪಟ್ಟಿ ಹಾಗೂ ಜಾತಿ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ: 9739185109ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.