Wednesday, August 20, 2025
Google search engine

Homeರಾಜ್ಯಹೊಯ್ಸಳ - ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೊಯ್ಸಳ – ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ” ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ನಾವೀನ್ಯತೆ ., ತಾರ್ಕಿಕ ಸಾಧನೆಗಳು , ಕ್ರೀಡೆ , ಕಲೆ , ಸಾಂಸ್ಕೃತಿಕ , ಸಂಗೀತ ಈ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗಳನ್ನು ಮಾಡಿರುವಂತಹ 5ವರ್ಷ ಮೇಲ್ಪಟ್ಟು ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ “ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಜಿಲ್ಲಾ ಮಟ್ಟದ ಆಯ್ಕೆಗಾಗಿ ಅರ್ಹ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದ್ದು, ಅಸಾಧಾರಣವೆಂದು ಇವರ ಸಾಧನೆಯ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

ಆಸಕ್ತರು ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್.ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ -29 ಇವರಿಂದ ಪಡೆದು ಅರ್ಜಿಗಳನ್ನು ತ್ರಿಪ್ರತಿಯಲ್ಲಿ ಭರ್ತಿ ಮಾಡಿ, ಸೆಪ್ಟೆಂಬರ್ 16ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಮಕ್ಕಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಕಚೇರಿ ದೂರವಾಣಿ ಸಂಖ್ಯೆ : 080-29578688 ಗೆ ಸಂಪರ್ಕಿಸುವಂತೆ ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular