ಮಡಿಕೇರಿ : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಫ್‍ಸಿಐ), ಮೈಸೂರು ಹಾಗೂ ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (ಐಎಚ್‍ಎಂ) ಬೆಂಗಳೂರು ಅವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ.
ಫುಡ್ ಮತ್ತು ಬೇವರೇಜ್ ಸರ್ವಿಸ್ ಸ್ಟೀವರ್ಡ್ ತರಬೇತಿಗೆ ಕನಿಷ್ಠ 10ನೇ ತರಗತಿ, ತರಬೇತಿಯು 4 ತಿಂಗಳು, 20 ರಿಂದ 45 ವರ್ಷದೊಳಗಿರಬೇಕು. ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ 1 ಆಗಿರುತ್ತದೆ.
ಅರ್ಜಿದಾರರು ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ, ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ, ವಿದ್ಯಾರ್ಹತೆಯ ಬಗ್ಗೆ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ ಸಲ್ಲಿಸಬೇಕು.
ಈ ತರಬೇತಿಗಳನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಅಕ್ಟೋಬರ್, 15 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571201 ಕಚೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಇ-ಮೇಲ್: ddkodagutourism@gmail.com ನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಬಿ.ಬಸಪ್ಪ ಅವರು ತಿಳಿಸಿದ್ದಾರೆ.