Wednesday, September 24, 2025
Google search engine

Homeರಾಜ್ಯಸುದ್ದಿಜಾಲಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ರಾಮನಗರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತು 35 ದಿನಗಳ ಉಚಿತ ತರಬೇತಿಯು ನವೆಂಬರ್ 04 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9113880324, 8027728166 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular