ಬೆಂಗಳೂರು: ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್(Institute for Social & Economic Change) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಅನೇಕ ಪ್ರೊಫೆಸರ್ (Professor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 10, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್/ಪೋಸ್ಟ್ ಮುಖಾಂತರ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ: ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸ್ನಾತಕೋತ್ತರ ಪದವಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 1,44,200 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ: ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆ,ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ರಿಜಿಸ್ಟ್ರಾರ್
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ
ನಾಗರಭಾವಿ ಪಿಒ
ಬೆಂಗಳೂರು – 560072
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 10, 2023