ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 4 ರೊಳಗೆ ಅರ್ಜಿ ಸಲ್ಲಿಸಬಹುದು.
2022-23ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆ ಬೆಂಗಳೂರು ಕೇಂದ್ರ ಇಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮಹಿಳೆಯರು ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-23204490/ 9901074633.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ಕೇಂದ್ರ ಯೋಜನೆ. 3ನೇ ಕ್ರಾಸ್, ಕಬ್ಬಡಿ ಕ್ರೀಡಾಂಗಣ ಹತ್ತಿರ, ಬಿ.ಬಿ.ಎಂ.ಪಿ ಕಟ್ಟಡ, ಮೊದಲನೇ ಮಹಡಿ, ಗೋವಿಂದರಾಜನಗರ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು.