Friday, April 11, 2025
Google search engine

Homeರಾಜ್ಯಉಪಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ಉಪಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ಬೆಂಗಳೂರು: ಮುಂಬರುವ ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಿದೆ. ಇನ್ನು ಲೋಕಸಭಾ ಚುನಾವಣೆ ಬಳಿಕ ನಿನ್ನೆಯಷ್ಟೇ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಹಾಗೂ ಸುಧಾಕರ್ ರೆಡ್ಡಿ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಇದರ ಬೆನ್ನಲ್ಲೇ ಇಂದು(ಶನಿವಾರ) ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಿದ್ದು, ಇದರ ವಿವರ ಕೆಳಗಿನಂತಿದೆ.

  • ವಿಧಾನಪರಿಷತ್ ದ.ಕ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಸ್ತುವಾರಿಗಳಾಗಿ ಸಂಸದರಾದ ಬಸವರಾಜ ಬೊಮ್ಮಾಯಿ‌, ಕೋಟ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರನ್ನು ನೇಮಕ ಮಾಡಲಾಗಿದೆ.
  • ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಉಪನಾಯಕ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಸಂಡೂರು ವಿಧಾನಸಭಾ ಕ್ಷೇತ್ರ-ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಎಂಎಲ್​ಸಿಗಳಾದ ಎನ್.ರವಿಕುಮಾರ್, ಕೆ.ಎಸ್.ನವೀನ್ ಅವರನ್ನು ನೇಮಕ ಮಾಡಲಾಗಿದೆ.
  • ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾದ ಡಾ.ಅಶ್ವತ್ಥ್​​ನಾರಾಯಣ, ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಹೆಚ್.ಎಸ್. ಗೋಪಿನಾಥ ರೆಡ್ಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ನೇಮಕ ಮಾಡಲಾಗಿದೆ.
RELATED ARTICLES
- Advertisment -
Google search engine

Most Popular