ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾಕರ ನಿರ್ದೇಶನಾಲಯದ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. ಅತಿಥಿ ಶಿಕ್ಷಕರ ನೇಮಕ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ನಡೆಯಲಿದೆ.
ಅತಿಥಿ ಶಿಕ್ಷಕರನ್ನು ಜಿಲ್ಲಾ ಹಂತದಲ್ಲಿಯೇ ನಿಯಮಾನುಸಾರ ಆಯ್ಕೆ ಮಾಡಲಾಗುತ್ತಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಮೆರಿಟ್ ಪದ್ಧತಿ ಅನುಸಾರ ನೇಮಕ ಮಾಡಲಾಗುತ್ತದೆ. ಪರೀಕ್ಷೆ ಎರಡು ಗಂಟೆ ಇರಲಿದೆ. ಏಕರೂಪದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ. 50ರ ಸರಾಸರಿ ಅಂಕಗಳು, ಪದವಿಯಲ್ಲಿ ಪಡೆದ ಶೇ. 30 ಅಂಕಗಳು ಮತ್ತು ಬಿಇಡಿಯಲ್ಲಿ ಪಡೆದಿರುವ ಶೇ. 20 ಅಂಕಗಳನ್ನು ಪರಿಗಣಿಸಲಾಗುತ್ತದೆ.
ಅರ್ಜಿಯು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in ನಲ್ಲಿ ಲಭ್ಯವಿದೆ. ಜತೆಗೆ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯಲ್ಲಿಯೂ ಅರ್ಜಿ ನಮೂನೆಗಳನ್ನು ಪಡೆಯಬಹುದು.