Monday, April 21, 2025
Google search engine

Homeರಾಜಕೀಯರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ

ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಹೊರಡಿಸಿರುವುದಾಗಿ ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರನ್ನೂ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ನೇಮಕಗೊಂಡಿದ್ದರೆ, ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿಯಾಗಿ ಬಿ.ಹೆಚ್. ವಿಶ್ವನಾಥ ನೇಮಕಗೊಂಡಿದ್ದಾರೆ. ಮಾಜಿ ಶಾಸಕರಾದ ಎಲ್. ನಾಗೇಂದ್ರ, ಸಿಎಸ್. ನಿರಂಜನ್ ಕುಮಾರ್ ಮತ್ತು ಅರುಣ್ ಕುಮಾರ್ ಪೂಜಾರ ಅವರಿಗೂ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಲಾಗಿದೆ.

RELATED ARTICLES
- Advertisment -
Google search engine

Most Popular