Friday, April 11, 2025
Google search engine

Homeರಾಜ್ಯಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದವರ ವಿರುದ್ಧ ಸೂಕ್ತ ಕ್ರಮ : ಸಚಿವ ಜಿ.ಪರಮೇಶ್ವರ್

ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದವರ ವಿರುದ್ಧ ಸೂಕ್ತ ಕ್ರಮ : ಸಚಿವ ಜಿ.ಪರಮೇಶ್ವರ್

ಉಡುಪಿ : ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ ನಡೆಸಿದ್ದು ಅಲ್ಲದೆ, ಅಲ್ಲಿದ್ದ ಹಲವು ಪೀಠೋಪಕರಣಗಳನ್ನು ಹೊಡೆದು ಹಾಕಿ, ಮಹಿಳೆಯರ ಮೇಲು ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಮಸಾಜ್ ಪಾರ್ಲರ್ ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ದಾಳಿ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಡುಪಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು. ಪಾಲಿಕೆಯಲ್ಲಿ ಟ್ರೇಡ್ ಲೈಸೆನ್ಸ್ ಪಡೆದಿರುತ್ತಾರೆ. ಇದರ ಬಗ್ಗೆ ನಾವು ಪರಿಶೀಲನೆ ನಡೆಸುತ್ತೇವೆ. ಲೈಸೆನ್ಸ್ ಇಲ್ಲದಿದ್ದರೆ ನಾವು ಅದನ್ನು ಸೀಜ್ ಮಾಡುತ್ತೇವೆ ಎಂದು ಉಡುಪಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಮಂಗಳೂರಿನ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರ ಕಾರ್ಯಕರ್ತರು ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ಅಕ್ಕ ಪಕ್ಕದಲ್ಲಿರುವ ಕಾಲೇಜು ಯುವತಿಯರು ಈ ಪಾರ್ಲರ್ ಗೆ ಬಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular