ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, ೯೧ ಯೋಜನೆಗಳ ಒಟ್ಟು ೭,೬೫೯.೫೨ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಅನುಮೋದನೆ ನೀಡಿದೆ.
ಬೆಂಗಳೂರಿನ ಕರ್ನಾಟಕ ಉದ್ಯೋಗಮಿತ್ರ ಕಛೇರಿಯಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಯ ೧೪೦ನೇ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಈ ಯೋಜನೆಗಳಿಂದ ಸುಮಾರು ೧೮,೧೪೬ ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆಯೆಂದು ಸಚಿವ ಎಂ. ಬಿ. ಪಾಟೀಲ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದಾಜು ೪,೪೦೪ ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಇದಲ್ಲದೇ ಹೆಚ್ಚುವರಿ ಬಂಡವಾಳ ಹೂಡಿಕೆಯ ೮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ೧೫ ಕೋಟಿ ರೂಪಾಯಿಯಿಂದ ೫೦ ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ ೫೭ ಹೊಸ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ೧,೧೪೪.೯೪ ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಇದರಿಂದ ರೂಪಾಯಿ ೭೬೩.೮೫ ಬಂಡವಾಳ ಹೂಡಿಕೆಯಾಗಲಿದೆ ಎಂದರು.
ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತ ಶ್ರೀಮತಿ ಗುಂಜನ್ ಕೃಷ್ಣ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ಎಚ್.ವಿ.ದರ್ಶನ್ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.