ಬೆಂಗಳೂರು: ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯ ಬಹು ದಿನಗಳ ಬೇಡಿಕೆಯಾಗಿದೆ. ಇಂತಹ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಇಂದು ಅನುಮೋದನೆ ನೀಡಿದೆ.
ಇಂದು ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸಂಪುಟದ ನಿರ್ಣಯಗಳನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಧ್ಯಮ ಗೋಷ್ಠಿಯಲ್ಲಿ ಹಂಚಿಕೊಂಡರು.
ದಲಿತ ಒಳ ಮೀಸಲಾತಿ ಜಾರಿ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಒಳಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಕಮಿಟಿ ರಚನೆಗೆ ತೀರ್ಮಾನಿಸಲಾಗಿದೆ ಎಂದರು.
ಡಾಟಾ ಪಡೆದು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಿದೆ. ಮೂರು ತಿಂಗಳೊಳಗೆ ವರದಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ನೇಮಕಾತಿ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ. ಯಾವುದೇ ನೇಮಕಾತಿ ಮಾಡದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.