ಹನೂರು: ಖರ್ಗೆ, ಖಂಡ್ರೆ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಆರಗ ಜ್ಞಾನೇಂದ್ರ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಮಾಜಿ ಶಾಸಕ ನರೇಂದ್ರ ಒತ್ತಾಯ ಮಾಡಿದ್ದಾರೆ.
ಹನೂರು ಪಟ್ಟಣದ ಕಾಂಗ್ರೇಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕರು ಕಸ್ತೂರಿರಂಗನ್ ವರದಿ ಅನುಷ್ಠಾನದ ಕುರಿತು ಅರಣ್ಯ ಸಚಿವರು ನೀಡಿರುವ ಹೇಳಿಕೆಗೆ ಖರ್ಗೆಯವರೂ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಗುರಿಯಾಗಿಸಿ
ಆ ಭಾಗದ ಜನರಿಗೆ ಮರ, ಗಿಡಗಳ ಬಗ್ಗೆ ಏನೂ ಗೊತ್ತಿಲ್ಲ. ಅವರು ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನರ ಜೀವನದ ಮೇಲೆ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿರುವುದು ನಮ್ಮ ದುರದೃಷ್ಟ. ಬಿಸಿಲಿನ ತಾಪಕ್ಕೆ ಅಲ್ಲಿನ ಜನ ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದರು. ಈಸಂಬಂಧ ಹನೂರು ಕ್ಷೇತ್ರದ ಮಾಜಿ ಶಾಸಕರು ಇವರ ಹೇಳಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು. ಈ ಸಂಬಂಧ ಕೂಡಲೆ ಕ್ಷಮೆಯಾಚಿಸಬೇಕು ಮತ್ತು ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಒತ್ತಾಯಿಸಿದ್ದಾರೆ.