Sunday, April 20, 2025
Google search engine

Homeಸಿನಿಮಾಅರ್ಜುನ್ ಯೋಗಿ ನಟನೆಯ ಅನಾವರಣ ಚಿತ್ರದ ಸಾಂಗ್ ಬಿಡುಗಡೆ

ಅರ್ಜುನ್ ಯೋಗಿ ನಟನೆಯ ಅನಾವರಣ ಚಿತ್ರದ ಸಾಂಗ್ ಬಿಡುಗಡೆ

‘ಅರಮನೆ ಗಿಳಿ’ ಖ್ಯಾತಿಯ ಯುವ ನಟ ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಅಭಿನಯದ ಚಿತ್ರ ‘ಅನಾವರಣ’. ಕ್ಯಾಚೀ ಟೈಟಲ್‌ನಿಂದ ಗಮನ ಸೆಳೆಯುತ್ತಿರುವ ‘ಅನಾವರಣ’ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ. ‘ಏನಾಗಿದೆ’ ಎಂಬ ಪ್ರೇಮಗೀತೆಗೆ ಶಶಿಕುಮಾರ್ ಬೆಳವಾಡಿ ಸಾಹಿತ್ಯ ಬರೆದಿದ್ದು, ವಿಶಾಲ್ ಸಿ ಕೃಷ್ಣ ಟ್ಯೂನ್ ಹಾಕಿದ್ದಾರೆ. ಅರ್ಜುನ್ ಯೋಗಿ ಮತ್ತು ಸಾರಿಕಾ ರಾವ್ ಹಾಡಿನಲ್ಲಿ ಮಿಂಚಿದ್ದಾರೆ.

ಈ ವೇಳೆ ಮಾತು ಶುರು ಮಾಡಿದ ಅರ್ಜುನ್ ಯೋಗಿ, “ನನ್ನ ಹಿಂದಿನ ಸಿನಿಮಾ ಚೇಸ್ ನೋಡಿ ನಿರ್ದೇಶಕರು ಕಾಲ್ ಮಾಡಿದ್ದರು. ಈ ಚಿತ್ರ ರಿಲೀಸ್ ದಿನ ನಮ್ಮ ಕೆಲಸ ನೋಡಿ ಮೆಚ್ಚಿ ಇನ್ನೊಂದು ಕೆಲಸ ಕೊಡ್ತಾರೆ ಅದೇ ಖುಷಿ ವಿಚಾರ. ‘ಅನಾವರಣ’ ಚಿತ್ರಕ್ಕೆ ಇಬ್ಬರು ನಿರ್ದೇಶಕರು. ಅವರು ಏನ್ ಕಥೆ ಹೇಳಿದ್ದರೋ, ಅದಕ್ಕಿಂತ ದುಪ್ಪಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಗ್ಲಿಂಪ್ಸ್, ಟ್ರೇಲರ್ ನೋಡಿದ್ದೇನೆ. ಈ ತಂಡ ಗೆದ್ದರೆ ಇನ್ನೊಂದಿಷ್ಟು ಸಿನಿಮಾಗಳು ಹುಟ್ಟಿಕೊಳ್ಳುತ್ತದೆ. ತುಂಬಾ ಚೆನ್ನಾಗಿ ಕಥೆ ಕಟ್ಟಿದ್ದಾರೆ. ನನಗೆ ಬಹಳ ಇಷ್ಟವಾಗಿದೆ. ನಾನು ಸಾಫ್ಟ್ ವೇರ್ ಇಂಜಿನಿಯರ್ ಪಾತ್ರ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ” ಎಂದು ಸಂತಸ ಹಂಚಿಕೊಂಡರು.

ಮತ್ತೊಬ್ಬ ನಿರ್ದೇಶಕ ಮಂಜುನಾಥ್ ಮಾತನಾಡಿ, “ತುಂಬಾ ಪ್ರೀತಿ ಮಾಡುವವರು, ತುಂಬಾ ಪ್ರೀತಿಯಾದರೆ ಯಾವ ರೀತಿ, ಕಾಟ, ಭಾದೆ ಇರುತ್ತದೆ ಅನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದೇವೆ” ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular