Wednesday, April 16, 2025
Google search engine

Homeರಾಜ್ಯಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಜಾರಿ ಮೂಲಕ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಸಿರುವ ಹಿನ್ನೆಲೆ ಪ್ರವಾಸಿ ತಾಣಗಳು ದೇವಾಲಯಗಳಿಗೆ ತೆರಳುತ್ತಿರುವ ಮಹಿಳೆಯರ ಪ್ರಮಾಣ ಹೆಚ್ಚುತ್ತಿದ್ದು ಈ ಹಿನ್ನೆಲೆ ಹೆಚ್ಚುವರಿ ಬಸ್ ಗಳನ್ನ ಬಿಡುವಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಶಕ್ತಿಯೋಜನೆ ಜಾರಿ ಹಿನ್ನೆಲೆ ವಿಕೇಂಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದೇವಸ್ಥಾನ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ, ಮೈಸೂರು ಮಹಾದೇಶ್ವರ ಬೆಟ್ಟಕ್ಕೆ ಹೆಚ್ಚು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ.

ಪ್ರಯಾಣಿಕರ  ಸುರಕ್ಷತಾ ದೃಷ್ಠಿಯಿಂದ ಸಾರಿಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಆಷಾಢ ಮಾಸದಲ್ಲಿ ದೇವಾಲಯಗಳಿಗೆ ಭೇಟಿ ನೀಡುವವರು ಕಡಿಮೆ. ಆದರೆ  ಶಕ್ತಿಯೋಜನೆ ಜಾರಿಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು, ದೇವಸ್ಥಾನಗಳು ತುಂಬಿ ತುಳುಕುತ್ತಿವೆ.

RELATED ARTICLES
- Advertisment -
Google search engine

Most Popular