ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ವಂಚನೆ ಪ್ರಕರಣಗಳಲ್ಲಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಅಜಯ್ ಪ್ರಸಾದ್ ಜಿ, ಬಂಧಿತ ವ್ಯಕ್ತಿ. ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ಅಧಿಕ ಲಾಭಂಶ ನೀಡುವುದಾಗಿ ನಂಬಿಸಿ ಸುಮಾರು ರೂ 1 ಕೋಟಿ 20 ಲಕ್ಷ ವಂಚನೆ ಮಾಡಿರುವ ಬೆಂಗಳೂರು ಮೂಲದ ಆರೋಪಿತನ ಮೇಲೆ ಉಳ್ಳಾಲ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿತ್ತು.
Nano Forex India ಎಂಬ ಸಂಸ್ಥೆಯ forex Robot Software ಮೂಲಕ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ತಿಂಗಳಿಗೆ 40% ಲಾಭ ಹಾಗೂ 20% ಮರುಪಾವತಿ ನೀಡುವುದಾಗಿ ನಂಬಿಸಿ, ಐಡಿ ಕಾರ್ಡ್ ಮತ್ತು ದಾಖಲೆಗಳನ್ನು ನೀಡಿ ವಿಶ್ವಾಸ ಹುಟ್ಟಿಸಿ, ಪ್ರೊರೆಕ್ಸ್ ರೋಬೋಟ್ ಸಾಫ್ಟ್ವೇರ್ ಬಳಸಲು ಅವಕಾಶ ನೀಡುವುದಾಗಿ ತಿಳಿಸಿ, ವಿವಿಧ ಗ್ರಾಹಕರಿಂದ ಸುಮಾರು 1 ಕೋಟಿ 20 ಲಕ್ಷ ಹಣವನ್ನು ಪಡೆದುಕೊಂಡಿರುತ್ತಾರೆ. ಆದರೆ ಹಣಕ್ಕೆ ಯಾವುದೇ ಲಾಭ ಅಥವಾ ಮರುಪಾವತಿ ನೀಡದೇ, ಹಣವನ್ನು ದುರುಪಯೋಗಪಡಿಸಿ ವಂಚನೆ ನಡೆಸಿದ್ದಾನೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2011 ನೇ ಸಾಲಿನಲ್ಲಿ 3 ಪ್ರಕರಣಗಳು ದಾಖಲಾಗಿತ್ತು..
ಆರೋಪಿಯನ್ನು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಮಂಗಳೂರು ನಗರದ ಮಾನ್ಯ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವರದಿ: ಶಂಶೀರ್ ಬುಡೋಳಿ



