Friday, April 18, 2025
Google search engine

Homeಅಪರಾಧಮನೆ ಕಳವು ಮಾಡುತ್ತಿದ್ದ ಕಳ್ಳರ ಬಂಧನ

ಮನೆ ಕಳವು ಮಾಡುತ್ತಿದ್ದ ಕಳ್ಳರ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಹಗಲು ವೇಳೆ ಮನೆ ಕಳವು ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಧಿತರನ್ನು ಫರಾಜ್ (27), ತೌಸಿಫ್ ಅಹಮ್ಮದ್‌ (34) ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 01-09-2023 ರಂದು ನಡೆದ ಸುಮಾರು 5,36,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಗಳ ಕಳವು ಪ್ರಕರಣ ನಡೆದಿತ್ತು.

ಈ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು 3,000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000/- ಮೌಲ್ಯದ ಮಹೀಂದ್ರ ಕ್ಸೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು 5,56,000/ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಸ್ವಾಧೀನಪಡಿಸಿಕೊಂಡ ಚಿನ್ನಾಭರಣಗಳ ಪೈಕಿ ಪಣಂಬೂರು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ ಚಿನ್ನಾಭರಣಗಳು ಸೇರಿರುತ್ತದೆ. ಆರೋಪಿಗಳ ಪೈಕಿ ಫರಾಜ್ ಎಂಬಾತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 279/2015 380 ಐಪಿಸಿ ಯಂತೆ ಹಾಗೂ ಪಣಂಬೂರು ಪೊಲೀಸ್ ಠಾಣೆ ಯಲ್ಲಿ ಅ. ಕ್ರ :21/2021 ಕ ಲಂ :454, 457, 380 ಐಪಿಸಿ ಯಂತೆ ಮನೆ ಕಳ್ಳತನ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular