Tuesday, April 8, 2025
Google search engine

Homeಅಪರಾಧಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದೂಡಿದ್ದ ಆರೋಪಿಗಳ ಬಂಧನ: 26 ಯುವತಿಯರ ರಕ್ಷಣೆ

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದೂಡಿದ್ದ ಆರೋಪಿಗಳ ಬಂಧನ: 26 ಯುವತಿಯರ ರಕ್ಷಣೆ

ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು 26 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಜನ ಆರೋಪಿಗಳನ್ನು ಬಂಧಸಿದ್ದಾರೆ.

ಆರೋಪಿಗಳು ಕೆಲಸ ಕೊಡಸುವ ನೆಪದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನ ಕರೆತರುತ್ತಿದ್ದರು. ಯುವತಿಯರನ್ನು ನಗರದ ಪಿಜಿಗಳಲ್ಲಿ ಇರಿಸಿ ಆರೋಪಿಗಳು ವೇಶ್ಯಾವಾಟಿಕೆಗೆ ದೂಡುತ್ತಿದ್ದರು.

ಈ ವಿಷಯ ತಿಳಿದ ಸಿಸಿಬಿ ಪೊಲೀಸರು ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಡೆ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ದೆಹಲಿ ಮೂಲದ ನಾಲ್ವರು, ಮುಂಬೈ ಮೂಲದ 9, ಪಶ್ಚಿಮ ಬಂಗಾಳ ಮೂಲದ 8 ಹಾಗೂ ಛತ್ತೀಸ್ ​​ಗಡ ಮೂಲದ ಓರ್ವ ಯುವತಿಯನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular