ಚಾಮರಾಜನಗರ: ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ದೊಡ್ಡ ಹರವೆ ಗ್ರಾಮದ ನವೀನ್ ಕುಮಾರ್, ಹೆಚ್.ಡಿ ಕೋಟೆ ಆಲನಹಳ್ಳಿಯ ಕುಮಾರ ನಾಯಕ್ ಬಂಧಿತರು.
ಬೈಕ್‌ನಲ್ಲಿ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಗಳು, ಅರಣ್ಯ ಸಂಚಾರ ದಳದ ಪೊಲೀಸರ ಕೈಗೆ ಲಾಕ್ ಆಗಿದ್ದಾರೆ. ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ.