ಚಿತ್ರದುರ್ಗ: ಕಳೆದ ಎರಡು ದಿನಗಳ ಹಿಂದೆ ಕಲುಷಿತ ನೀರು ಕುಡಿದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಅದರಲ್ಲಿ ಮಂಜುಳ ಎಂಬುವವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಮಂಜುಳಾ ಅವರ ಶವವನ್ನು ಇಂದು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಮನೆಯ ಬಳಿ ಶವ ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇನ್ನೂ ಈಗಾಗಲೇ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಎಸ್ಪಿ ಕೆ ಪರಶುರಾಮ್ ಕೂಡ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಪ್ರಖರಣದ ತನಿಖೆ ಕೂಡ ಚುರುಕಾಗಿದೆ. ನೀರಿನ ಸ್ಯಾಂಪಲ್ ಅನ್ನು ಸಹ ಜಿಲ್ಲಾಡಳಿತ ಕಲೆ ಹಾಕಿ ಪರೀಕ್ಷೆಗೆ ಕಳಿಸಿದ್ದು. ಸಾವಿನ ಕುರಿತು ಹೆಚ್ಚಿನ ಮಾಹಿತಿಯನ್ನು ಜಿಲ್ಲಾಡಳಿತ ಕಲೆ ಹಾಕುತ್ತಿದೆ.