Friday, April 4, 2025
Google search engine

Homeರಾಜಕೀಯಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ಅರವಿಂದ ಬೆಲ್ಲದ್‌ ಆಗ್ರಹ

ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ಅರವಿಂದ ಬೆಲ್ಲದ್‌ ಆಗ್ರಹ

ಬೆಳಗಾವಿ: ಎಸ್‌ಡಿಎ ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಆಗ್ರಹಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ಪಿಎಗಳನ್ನು ಬಳಸಿ ಮಾಡುತ್ತಿರುವ ಅನ್ಯಾಯ ನೋಡಲಾಗದೇ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣದಲ್ಲಿ ಜನ ಹೆಚ್ಚಿನ ಲೀಡ್‌ ನೀಡಿದ್ದರು. ಹೆಬ್ಬಾಳ್ಕರ್ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ ಯಾವುದೇ ಬಂಧನ ಆಗಿಲ್ಲ. ತಹಶೀಲ್ದಾರ್‌ ಕಚೇರಿ ಸಿಸಿಟಿವಿಯನ್ನು ವಶಕ್ಕೆ ಪಡೆದುಕೊಂಡಿಲ್ಲ‌. ಸಾಕ್ಷಿ ನಾಶದ ಅನುಮಾನ ವ್ಯಕ್ತವಾಗಿದೆ ಎಂದು ದೂರಿದರು.

ಸಾಕ್ಷಿ ನಾಶ ಮಾಡುವ ಬಗ್ಗೆ ಜನರಿಗೆ ಸಂಶಯವಿದೆ. ಪೊಲೀಸ್ ಇಲಾಖೆ ತನ್ನ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಸಿಎಂ‌ ಹಾಗೂ ಸಚಿವರ ಒತ್ತಡಕ್ಕೆ ಪೊಲೀಸ್ ಅಧಿಕಾರಿಗಳು ಮಣಿದಿದ್ದಾರೆ‌. ಪಿಎ ಮಾಡಿರುವ ಕೆಲಸಕ್ಕೆ ಸಚಿವರೇ ಹೊಣೆ ಹೊರಬೇಕು.ಪೊಲೀಸ್‌ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿಬಿಐಗೆ ಪ್ರಕರಣದ ತನಿಖೆ ವಹಿಸಬೇಕು ಎಂದು ಬೆಲ್ಲದ್‌ ಆಗ್ರಹಿಸಿದರು.

ರಾಜ್ಯ ಸರ್ಕಾರದ 16 ತಿಂಗಳಲ್ಲಿ ದಿನಕ್ಕೆ ಒಂದೊಂದು ಹಗರಣ ಹೊರಗೆ ಬರುತ್ತಿವೆ. ಭ್ರಷ್ಟಾಚಾರ ಅಂದರೆ ಕಾಂಗ್ರೆಸ್ ಎನ್ನುವಂತೆ ರಾಜ್ಯದಲ್ಲಿ ಆಗಿದೆ. ಯಾವುದೇ ಹಗರಣ ಬಂದರೂ ಅದರಲ್ಲಿ ಹೆಬ್ಬಾಳ್ಕರ್ ಹೆಸರು ಕೇಳಿ ಬರುತ್ತಿದೆ. ವಾಲ್ಮೀಕಿ ಹಗರಣ ಬಗ್ಗೆ ಸತೀಶ್ ಜಾರಕಿಹೊಳಿ ಚಕಾರ ಎತ್ತಿಲ್ಲ. ಮುಡಾ, ವಕ್ಫ್ ಇಲಾಖೆಯಲ್ಲಿ ಹಗರಣ ಮಾಡಿದ್ದಾರೆ. ಪ್ರವಾಸೋದ್ಯಮ, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದರು.

RELATED ARTICLES
- Advertisment -
Google search engine

Most Popular