Saturday, April 19, 2025
Google search engine

Homeರಾಜ್ಯಸಿದ್ದರಾಮಯ್ಯಗೆ ಜೈಲಿನಿಂದಲೇ ಆಡಳಿತ ನಡೆಸಿದ ಅರವಿಂದ್ ಕೇಜ್ರಿವಾಲ್ ಮಾದರಿ : ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯಗೆ ಜೈಲಿನಿಂದಲೇ ಆಡಳಿತ ನಡೆಸಿದ ಅರವಿಂದ್ ಕೇಜ್ರಿವಾಲ್ ಮಾದರಿ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಮುಡಾ ಹಗರಣದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಎಂ ಎಲ್ ಸಿ ಛಲವಾದಿ ನಾರಾಯಣ ಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ದೆಹಲಿ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ಅವರೇ ಮಾದರಿಯಾಗಿದ್ದಾರೆ. ಏಕೆಂದರೆ ಅವರು ಜೈಲಿನಲ್ಲಿ ಇದ್ದುಕೊಂಡೆ ಆಡಳಿತ ನಡೆಸಿದರು ಎಂದು ತಿಳಿಸಿದರು.

ಇಂದು ಅವರು ಬೆಂಗಳೂರಿನ ದೇವನಹಳ್ಳಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ರಾಜೀನಾಮೆ ಕೊಡಬೇಕಿತ್ತು. ಸಿದ್ದರಾಮಯ್ಯ ದೆಹಲಿಯ ಅರವಿಂದ್ ಕೇಜ್ರಿವಾಲರನ್ನು ಮಾದರಿಯಾಗಿ ಇಟ್ಟುಕೊಂಡಿದ್ದಾರೆ. ಏಕೆಂದರೆ ಅವರು ರಾಜೀನಾಮೆ ನೀಡದೆ ಜೈಲಿನಿಂದಲೇ ಆಡಳಿತ ನಡೆಸಿದ್ದಾರೆ. ಅದೇ ಇವರಿಗೆ ಪ್ರೇರಣೆಯಾಗಿದೆ ಎಂದರು.

ಕಾಂಗ್ರೆಸ್‌ ಸರ್ಕಾರದಲ್ಲಿ ಸಾಲು ಸಾಲಾಗಿ ಭ್ರಷ್ಟಾಚಾರ ಪ್ರಕರಣಗಳಿವೆ. ಬಹುತೇಕರು ಬೇಲ್‌ ಮೇಲೆ ಓಡಾಡುತ್ತಿದ್ದಾರೆ. ಬೇಲ್‌ ಅಂದರೂ ಒಂದೇ, ಜೈಲಂದರೂ ಒಂದೆ. ನಮ್ಮ ರಾಜ್ಯ ಕೇಂದ್ರಾಡಳಿತ ಪ್ರದೇಶವಲ್ಲ, ಆದ್ದರಿಂದ ತನಿಖೆ ಮಾಡುವ ಸಂಸ್ಥೆಗಳು ಮುಖ್ಯಮಂತ್ರಿಗಳ ಅಧೀನದಲ್ಲಿರುತ್ತವೆ. ಸರಿಯಾದ ತನಿಖೆ ನಡೆಯುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳ ಮೇಲಿರುವ ಪ್ರಕರಣಗಳನ್ನು ಸಿಬಿಐಗೆ ವರ್ಗಾವಣೆ ಮಾಡಬೇಕು.

RELATED ARTICLES
- Advertisment -
Google search engine

Most Popular