ನವದೆಹಲಿ: ಸುಪ್ರೀಂ ಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣವಚನ ಬೋಧಿಸಿದರು.
ನಿರ್ಗಮಿತ ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, 2025ರ ಮೇ 13 ರವರೆಗೆ ಖನ್ನಾ ರವರು ಅಧಿಕಾರದಲ್ಲಿ ಇರಲಿದ್ದಾರೆ.
ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿದ ತೀರ್ಪು, ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕ್ರಮವನ್ನು ಎತ್ತಿ ಹಿಡಿದ ತೀರ್ಪು ಸೇರಿದಂತೆ ಸುಪ್ರೀಂ ಕೋರ್ಟ್ ನೀಡಿದ ಹಲವು ಮಹತ್ವದ ತೀರ್ಪುಗಳಲ್ಲಿ ಸಂಜೀವ್ ಖನ್ನಾ ಅವರ ಪಾಲು ಕೂಡ ಇದೆ.