Friday, April 4, 2025
Google search engine

HomeUncategorizedರಾಷ್ಟ್ರೀಯಇಸ್ರೋದ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ

ಇಸ್ರೋದ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ

ಬೆಂಗಳೂರು: ಹಿರಿಯ ವಿಜ್ಞಾನಿ ವಿ.ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಹೊಸ ಅಧ್ಯಕ್ಷರನ್ನಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯನ್ನಾಗಿ ಭಾರತ ಸರ್ಕಾರ ನೇಮಕ ಮಾಡಿದೆ. ಹಾಲಿ ಅಧ್ಯಕ್ಷ ಎಸ್.ಸೋಮನಾಥ್ ಅವರ ಅಧಿಕಾರಾವಧಿಯ ಕೊನೆಯ ದಿನವಾದ ಈ ತಿಂಗಳ 14ರಂದು ಅವರು ಅಧಿಕಾರ ಸ್ವೀಕರಿಸುವರು.

ಕೇಂದ್ರ ಸಂಪುಟದ ನೇಮಕಾತಿ ಸಮಿತಿ 2025ರ ಜನವರಿ 7ರಂದು ಈ ಕುರಿತ ಅಧಿಕೃತ ಆದೇಶ ಹೊರಡಿಸಲಿದೆ. ನಾರಾಯಣನ್ ಎರಡು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿರುತ್ತಾರೆ. ನಾರಾಯಣನ್ ಪ್ರಸ್ತುತ ವಲಿಯಮಾಲಾದಲ್ಲಿ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (ಎಲ್ ಪಿಎಸ್ ಸಿ)ಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಕೆಟ್ ಮತ್ತು ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್ ನಲ್ಲಿ ಸುಮಾರು ನಾಲ್ಕು ದಶಕಗಳ ಅನುಭವ ಹೊಂದಿದ್ದಾರೆ.

ಎಲ್ ಪಿಎಸ್ ಸಿ ನಿರ್ದೇಶಕರಾಗಿ ಅವರು ಭಾರತದ ಬಾಹ್ಯಾಕಾಶ ಯೋಜನೆಗೆ ಪ್ರಮುಖ ಸಾಧನ ಎನಿಸಿದ ಜಿಎಸ್ಎಲ್ವಿ ಎಂಕೆ 3ಗೆ ಸಿಇ20 ಕ್ರಯೋಜನಿಕ್ ಎಂಜಿನ್ ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ನಾಯಕತ್ವದಲ್ಲಿ ಎಲ್ಪಿಎಸ್ ಸಿ 183 ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಂ ಹಾಗೂ ಕಂಟ್ರೋಲ್ ಪವರ್ ಪ್ಲಾಂಟ್ ಗಳನ್ನು ವಿವಿಧ ಇಸ್ರೋ ಮಿಷನ್ ಗಳಿಗಾಗಿ ಅಭಿವೃದ್ಧಿಪಡಿಸಿತ್ತು.

RELATED ARTICLES
- Advertisment -
Google search engine

Most Popular