ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು (ಆಗಸ್ಟ್ 22) ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ಆಗಮಿಸಿದ್ದು, ಈ ವೇಳೆ ಕಾಮಗಾರಿ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಹಿಂದೆಯೂ ಡಿ.ಕೆ.ಶಿವಕುಮಾರ್ ಅವರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದಾಗಲೂ ಸಹ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ಮಾಡಿದ್ದರು. ಇದೀಗ ಸರ್ಕಾರ ಬಂದ ನಂತರ ಮೊದಲ ಬಾರಿಗೆ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದಾರೆ.
ಇನ್ನು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಎತ್ತಿನಹೊಳೆ ಯೋಜನೆಯ ಕುರಿತು ಹೆಬ್ಬನಹಳ್ಳಿಯ ಪವರ್ ಗ್ರಿಡ್‌ನಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮ, ಎಸ್‌ಪಿ ಹರಿರಾಮ್ ಶಂಕರ್, ಸಿಇಓ ಪೂರ್ಣಿಮಾ ಸೇರಿದಂತೆ ಹಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಸಭೆ ಬಳಿಕ ಡಿ.ಕೆ.ಶಿವಕುಮಾರ್ ಅವರು, ಸಕಲೇಶಪುರ ತಾದೊಡ್ಡನಾಗರ, ಕಾಡುಮನೆ ಎಸ್ಟೇಟ್ ಬಳಿಯೂ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.