ತುಮಕೂರು: ಬೂಸಾ ಕೊಡಲು ತಡಮಾಡಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹಾಲಿನ ಡೈರಿಯಲ್ಲಿ ನಡೆದಿದೆ.
ಶೆಟ್ಟಿಕೆರೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವಕುಮಾರ್ ಹಲ್ಲೆಗೊಳಗಾದವರು.
ಕೇಳಿದ ತಕ್ಷಣ ಬೂಸಾ ಕೊಡಲಿಲ್ಲ ಎಂಬ ಕಾರಣಕ್ಕೆ ಕರ್ತವ್ಯನಿರತ ಶಿವಕುಮಾರ್ ಮೇಲೆ ನಾಗರಾಜು, ಯೋಗಾನಂದ್, ಅನಿಲ್ ಎಂಬುವರು ಹಲ್ಲೆ ಮಾಡಿದ್ದಾರೆ.
ಬೂಸಾ ಗೋದಾಮಿಗೆ ನುಗ್ಗಿ ದಾಂಧಲೆ ಮಾಡಿದ್ದು, ಹಲ್ಲೆ ನಡೆಸಿದ ಮೂವರ ವಿರುದ್ಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.