Wednesday, July 30, 2025
Google search engine

Homeರಾಜ್ಯಚುನಾವಣೆ ಕರ್ತವ್ಯಕ್ಕೆ ಶಿಕ್ಷಕರ ಹೊರತು ಬೇರೆಯವರನ್ನು ನಿಯೋಜಿಸಿ: ಶಾಲಿನಿ ರಜನೀಶ್‌ ಸೂಚನೆ

ಚುನಾವಣೆ ಕರ್ತವ್ಯಕ್ಕೆ ಶಿಕ್ಷಕರ ಹೊರತು ಬೇರೆಯವರನ್ನು ನಿಯೋಜಿಸಿ: ಶಾಲಿನಿ ರಜನೀಶ್‌ ಸೂಚನೆ

ಬೆಂಗಳೂರು: ಚುನಾವಣಾ ಕರ್ತವ್ಯಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ನಿತ್ಯದ ಪಾಠಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ರಜಾ ದಿನಗಳು, ಬೋಧಕೇತರ ಅವಧಿಯಲ್ಲಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಆದ್ದರಿಂದ ಬೋಧಕೇತರ ಹಾಗೂ ಇತರೆ ಇಲಾಖೆಯ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular