Monday, April 21, 2025
Google search engine

Homeರಾಜಕೀಯಕಾಂಗ್ರೆಸ್‌ ಔತಣಕೂಟದಲ್ಲಿ ಎಸ್‌. ಟಿ ಸೋಮಶೇಖರ್‌, ಶಿವರಾಮ ಹೆಬ್ಬಾರ್‌ ಭಾಗಿ

ಕಾಂಗ್ರೆಸ್‌ ಔತಣಕೂಟದಲ್ಲಿ ಎಸ್‌. ಟಿ ಸೋಮಶೇಖರ್‌, ಶಿವರಾಮ ಹೆಬ್ಬಾರ್‌ ಭಾಗಿ

ಬೆಳಗಾವಿ:  ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕಿದ್ದು, ಕಾಂಗ್ರೆಸ್‌ ಔತಣಕೂಟದಲ್ಲಿ ಬಿಜೆಪಿ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ.

ಹೌದು, ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್‌, ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಅವರು ಅವರು ಭಾಗವಹಿಸಿದ್ದಾರೆ.

ಈಗಾಗಲೇ ಹೆಚ್‌ ವಿಶ್ವನಾಥ್‌ ನನ್ನ ತವರು ಮನೆ ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್‌ ಹೋಗುವುದರಲ್ಲಿ ತಪ್ಪಿಲ್ಲ ಎಂದು ಕಾಂಗ್ರೆಸ್‌ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ.

ಇತ್ತ ಈಗಾಗಲೇ ಬಿಜೆಪಿ ಸಭೆಗಳಿಂದ ದೂರ ಉಳಿದಿರುವ ಅವರು, ಶಾಸಕ ಎಸ್‌ ಟಿ ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಬಾರ್‌ ಮತ್ತೆ ಕಾಂಗ್ರೆಸ್‌ ಸೇರುವ ಕುರಿತು ಬಹುತೇಕ ಖಚಿತವಾಗಿದೆ.

ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೇಳುವ ನೆಪದಲ್ಲಿ ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಈ ಇಬ್ಬರೂ ಶಾಸಕರು, ಬುಧವಾರ ರಾತ್ರಿ ಪಕ್ಷದ ಶಾಸಕರ ಜೊತೆ ಭೋಜನಕೂಟದಲ್ಲಿ ಭಾಗವಹಿಸಿದರು ಎಂದು ಬಿಜೆಪಿ ಗೆ ಕೈ ಕೊಟ್ಟ ಕಾಂಗ್ರೆಸ್‌ ಸೇರ್ಪಡೆಯಾಗುವುದು ಖಚಿತ ಎನ್ನಲಾಗಿದೆ.

ಭೋಜನಕೂಟಕ್ಕೂ ಮೊದಲು ಕಾಂಗ್ರೆಸ್‌ ಶಾಸಕರ ಸಭೆ ನಡೆಯಿತು. ವಿಧಾನಸಭೆ ತಡವಾಗಿ ಮುಕ್ತಾಯವಾದ ಕಾರಣ ಎಲ್ಲ ಶಾಸಕರು ಬಂದು ಸೇರುವುದು ವಿಳಂಬವಾಯಿತು. ಹೀಗಾಗಿ ವಿಳಂಬವಾಗಿ ಸಭೆ ಆರಂಭವಾಯಿತು. ಸಭೆಯಲ್ಲಿ ಸೋಮಶೇಖರ್‌ ಮತ್ತು ಹೆಬ್ಬಾರ್‌ ಭಾಗವಹಿಸಲಿಲ್ಲ. ಆದರೆ, ಭೋಜನದಲ್ಲಿ ಎಲ್ಲರ ಜೊತೆ ಭಾಗವಹಿಸಿದರು ಎಂದೂ ಮೂಲಗಳು ಹೇಳಿವೆ.

ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲ ರೀತಿಯಲ್ಲೂ ಸಿದ್ಧರಾಗುವಂತೆ ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಲಾಯಿತು. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಘೋಷಿಸಿದ ‘ಗ್ಯಾರಂಟಿ’ ಯೋಜನೆಗಳು ಯಶಸ್ವಿಯಾಗಿವೆ. ಈ ಯೋಜನೆಗಳ ಬಗ್ಗೆ ಜನವರಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮತ್ತು ವಿಧಾನ ಸಭಾ ಕ್ಷೇತ್ರವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ‘ಗ್ಯಾರಂಟಿ’ ಯೋಜನೆಗಳ ಪ್ರಯೋಜನದ ಪಡೆದ ಫಲಾನುಭವಿಗಳನ್ನು ಒಂದೆಡೆ ಸೇರಿಸಬೇಕು. ಆ ಮೂಲಕ, ಲೋಕಸಭಾ ಚುನಾವಣೆಗೆ ಸಜ್ಜಾಗಬೇಕು ಎಂದು ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಲಾಗಿದೆ.

ಕಳೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಶಾಸಕರಿಗೆ ₹ 25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಅದಕ್ಕೆ ಎಲ್ಲ ಶಾಸಕರು ಮುಖ್ಯಮಂತ್ರಿ ಅವರನ್ನು ಅಭಿನಂದಿಸಿದರು. ಮುಂದಿನ ಬಜೆಟ್‌ ಬಳಿಕ ಎಲ್ಲ ಶಾಸಕರ ಬೇಡಿಕೆಗಳ ಬಗ್ಗೆ ವಿಶೇಷ ಗಮನಹರಿಸಲಾಗುವುದು. ಅಲ್ಲದೆ ಇನ್ನಷ್ಟು ವಿಶೇಷ ಅನುದಾನ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು ಎಂದೂ ಮೂಲಗಳು ಹೇಳಿವೆ.

RELATED ARTICLES
- Advertisment -
Google search engine

Most Popular