Monday, April 21, 2025
Google search engine

HomeUncategorizedರಾಷ್ಟ್ರೀಯರಾಮಮಂದಿರ ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ?: ಫೋಟೋ ಬಿಡುಗಡೆ ಮಾಡಿದ ಟ್ರಸ್ಟ್

ರಾಮಮಂದಿರ ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ?: ಫೋಟೋ ಬಿಡುಗಡೆ ಮಾಡಿದ ಟ್ರಸ್ಟ್

ಅಯೋಧ್ಯೆ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ, ಯಾವ ರೀತಿ ನಡೆಯುತ್ತಿದೆ ಎನ್ನುವುದಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಎಕ್ಸ್‌ನಲ್ಲಿ ಫೋಟೊ ಮತ್ತು ವಿಡಿಯೊವನ್ನು ಹಂಚಿಕೊಂಡಿದೆ.

ಟ್ರಸ್ಟ್‌ ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ನೆಲಮಹಡಿಯಲ್ಲಿರುವ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಸ್ಥಾಪಿಸಲಾಗುತ್ತದೆ. ದೇವಾಲಯದ ನೆಲಮಹಡಿ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಹೀಗಾಗಿ ಪ್ರಾಣ ‍ಪ್ರತಿಷ್ಠಾಪನೆಗೆ ಯಾವುದೇ ಸಮಸ್ಯೆಯಿಲ್ಲ. ಕಾರ್ಯಕ್ರಮಕ್ಕೆ 4 ಸಾವಿರ ಸಾಧುಗಳಿಗೆ ಆಹ್ವಾನ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜ.22 ರಂದು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ವಿಧಿವಿಧಾನಗಳು ಜನವರಿ 16 ರಿಂದ ಆರಂಭಗೊಳ್ಳಲಿದೆ ಎಂದು ಟ್ರಸ್ಟ್‌ ತಿಳಿಸಿದೆ.

RELATED ARTICLES
- Advertisment -
Google search engine

Most Popular