Friday, August 8, 2025
Google search engine

Homeರಾಜ್ಯಯೂಟ್ಯೂಬರ್ ಗಳ ಮೇಲೆ ಹಲ್ಲೆ ಕೇಸ್ : ಯಾರೇ ತಪ್ಪು ಮಾಡಿದ್ರು ಕಾನೂನು ರೀತಿ ಕ್ರಮ...

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಕೇಸ್ : ಯಾರೇ ತಪ್ಪು ಮಾಡಿದ್ರು ಕಾನೂನು ರೀತಿ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ನಡೆಸಲು ನಾವು ಸಿದ್ದರಿದ್ದೇವೆ, ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಅಸ್ಥಿಪಂಜರ ಶೋಧದ ನಡುವೆ ಧರ್ಮಸ್ಥಳ ಉದ್ವಿಗ್ನವಾಗಿದೆ. ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಅವರ ಕ್ಯಾಮರಾಗಳನ್ನು ಹಾಳು ಮಾಡಲಾಗಿದೆ. ನೇತ್ರಾವತಿಯ ಪಾಂಗಳ ಎಂಬಲ್ಲಿ ಹಲ್ಲೆ ನಡೆಸಲಾಗಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ತಡರಾತ್ರಿ ಪೊಲೀಸ್ ಠಾಣೆಯ ಎದುರು ಪರ-ವಿರೋಧದವರು ಪ್ರತಿಭಟನೆ ನಡೆಸಿದ್ದಾರೆ.

ಕುಡ್ಲ ರ್ಯಾಂಪೇಜ್ ನ ಅಜಯ್ ಅಂಚನ್, ಯುನೈಟಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರ್ಯಾಂಪೇಜಿನ ಕ್ಯಾಮೆರಾ ಮೆನ್ ಮೇಲೆ ಬುಧವಾರ ಸಂಜೆ ಹಲ್ಲೆ ನಡೆಸಲಾಗಿದೆ.

RELATED ARTICLES
- Advertisment -
Google search engine

Most Popular