Monday, April 21, 2025
Google search engine

Homeಅಪರಾಧಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ: ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ: ಇಬ್ಬರನ್ನು ಹೊಡೆದು ಕೊಂದ ಜನ

ಮೇಘಾಲಯ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯದ ಖಾಸಿ ಹಿಲ್ಸ್​ ಜಿಲ್ಲೆಯ ಮೈರಾಂಗ್ ​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.

ಪೊಲೀಸರ ಪ್ರಕಾರ ಬಾಲಕಿ ಮನೆಯಲ್ಲಿದ್ದಾಗ ಇಬ್ಬರೂ ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.

ಬಾಲಕಿ ಕಿರುಚಾಟವನ್ನು ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದು ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಅಕ್ಕಪಕ್ಕದ ಮನೆಯವರು ಊರಿನ ಎಲ್ಲರಿಗೂ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ನೂರಕ್ಕೂ ಅಧಿಕ ಮಂದಿ ಸೇರಿ ಇಬ್ಬರನ್ನು ಥಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ಇಬ್ಬರಲ್ಲಿ ಒಬ್ಬ ತಿರೋತ್ ಸಿಂಗ್ ಎಂಬಾತ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನೊಬ್ಬ ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು. ಛತ್ತೀಸ್​ ಗಢದ ರಾಯ್​ಪುರ ಜಿಲ್ಲೆಯ ಅರಂಗ್ ಪೊಲೀಸ್​ ಠಾಣೆಯ ಕಲೈ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಮದುವೆ ನೆಪದಲ್ಲಿ ಆರೋಪಿ ಸಂತ್ರಸ್ತೆಯನ್ನು 6 ತಿಂಗಳಿನಿಂದ ಅತ್ಯಾಚಾರವೆಸಗುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಯುವಕನನ್ನು ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular