Saturday, April 19, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಯತ್ನ: ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ

ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಯತ್ನ: ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ

ಮಂಗಳೂರು(ದಕ್ಷಿಣ ಕನ್ನಡ): ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರು ಏರ್ ಪೋರ್ಟ್ ಮೂಲಕ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಅಡ್ಡಹಾಕಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಯತ್ನಿಸಿದ ಘಟನೆ ನಡೆದಿದ್ದು ಇವ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‌

ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಅಷ್ಟರಲ್ಲಿ ಪೊಲೀಸರು ಸೇರಿದ್ದು ಕಾರ್ಯಕರ್ತರನ್ನು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ. ಬಳಿಕ ಏರ್ಪೋರ್ಟ್ ನಲ್ಲಿದ್ದ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಸ್ಥಳಕ್ಕೆ ಆಗಮಿಸಿದ್ದು ಕೂಡಲೇ ಜಾಗ ಖಾಲಿ ಮಾಡಲು ಹೇಳಿದ್ದಾರೆ. 

ಇದೇ ವೇಳೆ, ಬಿಜೆಪಿ ಕಾರ್ಯಕರ್ತರು ಕಮಿಷನರ್ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾರೆ. ಶಾಸಕರ ವಿರುದ್ದ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆಂದು ಹೇಳಿದರೂ, ಬಿಡಲಿಲ್ಲ. ಕಾಂಗ್ರೆಸಿಗೆ ಧಿಕ್ಕಾರ ಕೂಗುತ್ತಿದ್ದಾಗಲೇ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದು ಕೆಲವು ಯುವಕರು ನೆಲದಲ್ಲಿ ಹೊರಳಾಡಿದ್ದಾರೆ. ಬಳಿಕ ಎಲ್ಲರನ್ನೂ ಪೊಲೀಸ್ ಬಸ್ಸಿಗೆ ತುಂಬಿಸಿದ್ದಾರೆ. 

RELATED ARTICLES
- Advertisment -
Google search engine

Most Popular