Saturday, April 19, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ಕಾರ್ಯಕರ್ತರು ಬಂಧನ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ಕಾರ್ಯಕರ್ತರು ಬಂಧನ

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಇಂದು ಬುಧವಾರ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೆಕು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ೧೭ಂ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ.

ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ೧೭ಂ ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular