ಕೆ.ಆರ್.ಸಾಗರ: ಕೆ.ಆರ್.ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸೋಮವಾರ ಮಧ್ಯಾಹ್ನ ಕಾಮುಕನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಣ್ಣ(55) ಬಂಧಿತ ಆರೋಪಿ.
ಈತ ತನ್ನ ಮನೆಯ ಪಕ್ಕದಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಇತ್ತ ಮನೆಯಲ್ಲಿ ಬಾಲಕಿ ಕಾಣದಿರುವುದನ್ನು ಕಂಡು ತಾಯಿ ಹುಡುಕಾಡಿದಾಗ ಆರೋಪಿ ಮನೆಯಲ್ಲಿ ಬಾಲಕಿ ಚೀರಿಕೊಂಡ ಶಬ್ದ ಕೇಳಿಬಂತು. ಕೂಡಲೇ ಸ್ಥಳೀಯರ ನೆರವಿನಿಂದ ಮನೆಯ ಬಾಗಿಲು ಒಡೆದು ಒಳಹೋಗಿ ನೋಡಿದಾಗ ಬಾಲಕಿಯನ್ನು ನಗ್ನ ಸ್ಥಿತಿಯಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ.
ಕೂಡಲೇ ಪಾಲಕರು ಪೊಲೀಸರಿಗೆ ದೂರು ನೀಡಿದರು. ಕಾರ್ಯಪ್ರವೃತ್ತರಾದ ಪಿಎಸ್‌ಐ ಬಸವರಾಜು ನೇತೃತ್ವದ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಮೈಸೂರು ಕೆ.ಆರ್. ಆಸ್ಪತ್ರೆಗೆ ಪರೀಕ್ಷೆಗೆ ಕರೆದೊಯ್ಯಲಾಗಿದೆ.
ಕೆ.ಆರ್. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.