ಹನಗೋಡು: ಬುದ್ದಿಮಾಂದ್ಯ ವಿಕಲಚೇನ ಯುವತಿ ಮೇಲೆ ಅತ್ಯಾಚಾರ ಯತ್ನ ಪ್ರಕರಣವು ತಾಲೂಕಿನ ಗ್ರಾಮವೊಂದರಲ್ಲಿ ಜರುಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತಾಲೂಕಿನ ಕಿರಂಗೂರು ಗ್ರಾಮದ ಪುನಿತ್ ಆಚಾರಿ ಬಂಧಿತ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಮನೆಯವರು ಯಾರು ಇಲ್ಲದ ಸಮಯದಲ್ಲಿ ಒಳ ನುಗ್ಗಿರುವ ಆರೋಪಿ ಪುನಿತ್‌ಆಚಾರಿ ಯುವತಿಯನ್ನು ಬೆದರಿಸಿ ಆಕೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟಿದ್ದಾನೆಂದು ಪೋಷಕರು ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಮಾತು ಬಾರದ ಬುದ್ದಿಮಾಂದ್ಯ ವಿಕಲಚೇತನ ಯುವತಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಮಾನಸಿಕ ತಜ್ಞರ ಬಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.