Friday, April 4, 2025
Google search engine

Homeರಾಜ್ಯಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಆರ್.ಅಶೋಕ್ ಸೇರಿ ಬಿಜೆಪಿಯ ಹಲವು ನಾಯಕರು ಪೋಲಿಸ್ ವಶಕ್ಕೆ

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಆರ್.ಅಶೋಕ್ ಸೇರಿ ಬಿಜೆಪಿಯ ಹಲವು ನಾಯಕರು ಪೋಲಿಸ್ ವಶಕ್ಕೆ

ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.ಹೀಗಾಗಿ, ನೂರಾರು ಕಾರ್ಯಕರ್ತರೊಂದಿಗೆ ರಸ್ತೆಗಿಳಿದು ಸಿಎಂ ಮನೆ ಕಡೆ ತೆರಳಲು ಮುಂದಾದರು. ಅಷ್ಟರಲ್ಲೇ ಬ್ಯಾರಿಕೇಡ್ ಹಾಕಿದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ತಡೆದರು. ಬ್ಯಾರಿಕೇಡ್ ಮೇಲೆಯೇ ಹತ್ತಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಿ.ಟಿ. ರವಿ, ಎಸ್.ಆರ್. ವಿಶ್ವನಾಥ್, ಸಿ.ಕೆ. ರಾಮಮೂರ್ತಿ, ಮುನಿರತ್ನ, ಬೈರತಿ ಬಸವರಾಜ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿ ಬಸ್​​ಗಳಲ್ಲಿ ಕರೆದೊಯ್ದರು. ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಬೆಂಕಿ ಹಚ್ಚಲು ಯತ್ನಿಸಿದರು.

RELATED ARTICLES
- Advertisment -
Google search engine

Most Popular