ಸ್ಕೂಟರ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಲು ಯತ್ನಿಸಿ, ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09-02-20206 ರ ಬೆಳಿಗ್ಗೆ ಸುಮಾರು 8.30 ಗಂಟೆಗೆ, 16 ವರ್ಷದ ಶಾಲಾ ಬಾಲಕಿ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ವ್ಯಕ್ತಿಗಳು ಅವಳನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ ಮತ್ತು ಅವಳು ಪ್ರತಿರೋಧಿಸಿದಾಗ, ಅವರು ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿರುತ್ತಾರೆ ಗಾಯಗಳು ಮೇಲ್ಮೈಯಾಗಿದ್ದು, ಹೊಲಿಗೆ ಹಾಕಿರುವುದಿಲ್ಲ. ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಅಪಹರಣಕ್ಕೆ ಯತ್ನ
RELATED ARTICLES



