ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ತುಂಬೆ ಗ್ರಾಮದ ಹನಮನಗರ ಎಂಬಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಆಗ ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೇ ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರುಗಳನ್ನು ಹಿಡಿದು ವಿಚಾರಿಸಿದಾಗ ಒಬ್ಬಾತ ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) & ಮತ್ತೋರ್ವ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂಬುದಾಗಿ ತಿಳಿಸಿದ್ದಾರೆ. ವಿಚಾರಣೆಯ ವೇಳೆ ತಾವುಗಳು ಅಧಿಕ ಹಣ ಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆ.
ಮುಂದಿನ ಕಾನೂನು ಕ್ರಮಕ್ಕಾಗಿ ವಾಹನಗಳನ್ನು ಹಾಗೂ 810 ಗ್ರಾಂ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ : 183/2025 ಕಲಂ: 8(C), 20(B) ii (a) NDPS Act ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



