ಮಂಗಳೂರು (ದಕ್ಷಿಣ ಕನ್ನಡ): ಕಳ್ಳರು ಮನೆಯೊಂದರ ಕಿಟಕಿಯ ಗ್ರಿಲ್ ಕತ್ತರಿಸಿ ಕಳವಿಗೆ ಯತ್ನಿಸಿದ ಘಟನೆ ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ರಸ್ತೆಯಲ್ಲಿ ನಡೆದಿದೆ.
ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರಲ್ಲಿ ಮನೆ ಮಂದಿ ಮಲಗಿದ್ದ ವೇಳೆ ಈ ಕೃತ್ಯ ನಡೆದಿದೆ.
ಸಮೀಪದ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳರ ಚಲನವಲನ ಸೆರೆಯಾಗಿದೆ. ಐವರ ತಂಡ ಮನೆಯೊಂದರನ್ನು ಆವರಣ ಪ್ರವೇಶಿಸುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಸ್ಕ್ ಧರಿಸಿರುವ ಕಳ್ಳರು ಬ್ಯಾಗ್, ಮತ್ತು ಲೈಟ್ ಅನ್ನು ಹೊಂದಿದ್ದಾರೆ. ಈ ತಂಡ ಮನೆಯ ಕೊಠಡಿಯ ಕಿಟಕಿಯ ಗ್ರಿಲ್ ಅನ್ನು ಕತ್ತರಿಸಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದೆ.
ಇಂತಹ ಕೃತ್ಯಗಳ ಬಗ್ಗೆ ಸಾರ್ವಜನಿಕರು ಜಾಗ್ರತೆ ವಹಿಸಬೇಕು. ಅನುಮಾನಾಸ್ಪದ ವ್ಯಕ್ತಿಗಳು ಪರಿಸರದಲ್ಲಿ ಅಥವಾ ಆಸುಪಾಸಿನಲ್ಲಿ ಕಂಡುಬಂದಲ್ಲಿ ಪೊಲೀಸ್ ಕಂಟ್ರೋಲ್ ನಂಬರ್ 9480802321 ಗೆ ಅಥವಾ 112ಗೆ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ತಿಳಿಸಿದ್ದಾರೆ.