ಚಿಕ್ಕಬಳ್ಳಾಪುರ : ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಹೋಗುವವರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದ್ದು, . ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜ.1 ರ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಡಿ. 31ಸಂಜೆ 6 ಗಂಟೆಯಿಂದ 2025 ಜ.1ರಂದು ಬೆಳಿಗ್ಗೆ 7 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ.
ಇದೀಗ ಹೊಸ ವರ್ಷಕ್ಕೆ ಹೊರಗೆ ಹೋಗುವುದಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಅದರಲ್ಲೂ ಹೆಚ್ಚಾಗಿ ಬೆಟ್ಟದ ಕಡೆ ಹೋಗಿ ಸಮಯ ಕಳೆಯುವುದಕ್ಕೆ ನೋಡುತ್ತಾರೆ. ಆದರೆ ಹೊಸ ವರ್ಷಾಚರಣೆಗೆ ನಂದಿಬೆಟ್ಟದಲ್ಲಿ ನಿರ್ಬಂಧ ಹೇರಲಾಗಿದೆ.ಡಿ.31ಸಂಜೆ 6 ಗಂಟೆಯಿಂದ ಜ.1 ಬೆಳಿಗ್ಗೆ7 ಗಂಟೆವರೆಗೂ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.