Monday, August 25, 2025
Google search engine

Homeಸ್ಥಳೀಯಪ್ರವಾಸಿಗರ ಗಮನಕ್ಕೆ: ಸೆ.1 ಮತ್ತು 2ರಂದು ಮೈಸೂರು ಅರಮನೆಗೆ ಸಾರ್ವಜನಿಕ ಪ್ರವೇಶ ನಿಷೇಧ

ಪ್ರವಾಸಿಗರ ಗಮನಕ್ಕೆ: ಸೆ.1 ಮತ್ತು 2ರಂದು ಮೈಸೂರು ಅರಮನೆಗೆ ಸಾರ್ವಜನಿಕ ಪ್ರವೇಶ ನಿಷೇಧ

ಮೈಸೂರು: ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1, 2ರಂದು ಭಾಗಿಯಾಗಲಿದ್ದಾರೆ. ಅಲ್ಲದೇ ಮೈಸೂರು ಅರಮನೆಗೂ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್.1 ಮತ್ತು 2ರಂದು ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಕುರಿತಂತೆ ಅರಮನೆ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಸೆಪ್ಟೆಂಬರ್.1ರಂದು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಅರಮನೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಸೆಪ್ಟೆಂಬರ್.2ರ ಮಧ್ಯಾಹ್ನದವರೆಗೆ ಪ್ರವೇಶ ನಿಷೇಧ ಮುಂದುವರೆಯಲಿದೆ ಎಂದು ತಿಳಿಸಿದೆ.

ರಾಷ್ಟ್ರಪತಿ ಮುರ್ಮು ಭೇಟಿ ಹಿನ್ನಲೆಯಲ್ಲಿ ಮೈಸೂರು ಅರಮನೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಪ್ರವಾಸಿಗರು ಸೆಪ್ಟೆಂಬರ್.1, 2ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲಾನ್ ಮಾಡಿದ್ದರೇ ಕೈಬಿಡುವುದು ಒಳಿತು.

RELATED ARTICLES
- Advertisment -
Google search engine

Most Popular