ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಸಪ್ತಾಹ ಕಾರ್ಯಕ್ರಮದ ಜಾಥ ಮೆರವಣಿಗೆಗೆ ನಗರದ ಜೆ.ಸಿ ವೃತ್ತದಲ್ಲಿ ಅಬಕಾರಿ ಇಲಾಖೆಯ ಉಪ ಅಧೀಕ್ಷಕರಾದ ಡಿ.ಜಿ ಕಿರಣ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾನಸಿಕ ರೋಗ ತಜ್ಞರಾದ ಡಾ.ಕೆ.ಪಿ ಅಶ್ವಥ್, ಸರ್ವೇಕ್ಷಣಾಧಿಕಾರಿ ಡಾ. ಸಂಜಯ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಆರ್ ಶಶಿಧರ್, ಮಿಮ್ಸ್‍ನ ಮನೋರೋಗ ತಜ್ಞ ಡಾ.ಹೆಚ್ ವಿ ಶಶಾಂಕ್, ಜಿಲ್ಲಾ ಕರಗೃಹ ಅಧಿಕ್ಷಕರಾದ ಟಿ.ಕೆ ಲೋಕೇಶ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಂ ಎನ್ ಆಶಾಲತಾ, ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳಾ, ಆರ್,ಸಿ,ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.