ಹೈದರಾಬಾದ್: ಆಟೋ ಚಾಲಕನೊಬ್ಬ ಪತ್ನಿಯ ತಲೆಯನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಪತ್ನಿ ಬೇರೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬುದನ್ನು ತಿಳಿದ ಪತಿ ಆಕೆಯನ್ನು ಹತ್ಯೆ ಮಾಡಿ ಹರಿತವಾದ ಚಾಕುವಿನಿಂದ ತಲೆಯನ್ನು ಕತ್ತರಿಸಿದ್ದಾನೆ.
ಹೈದರಾಬಾದ್ ನ ಅಬ್ದುಲ್ಲಾಪುರ್ ಮೆಟ್ ಜೆಎನ್ ಎನ್ ಯುಆರ್ ಎಂ ಕಾಲೋನಿಯಲ್ಲಿ ಎರಡು ಬೆಡ್ ರೂಮಿನ ಸರ್ಕಾರಿ ವಸತಿ ಗೃಹದಲ್ಲಿ ವಾಸವಿದ್ದ ಹಂತಕ, ಹೆಂಡತಿ ತಲೆಯನ್ನು ಕತ್ತರಿಸಿ ಮನೆಯಲ್ಲಿಯೇ ಇಟ್ಟುಕೊಂಡಿದ್ದ. 41 ವರ್ಷದ ಪತ್ನಿ ಪುಷ್ಪಲತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ವಿಜಯ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆತ ಕೊಲೆಗೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ.
2014ರಲ್ಲೂ ವಿಜಯ್ ಪುಷ್ಪಲತಾ ಮೇಲೆ ಹಲ್ಲೆ ನಡೆಸಿದ್ದ, ದೂರಿನ ಮೇರೆಗೆ ವಿಜಯ್ ಮೇಲೆ ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.



