Wednesday, April 9, 2025
Google search engine

Homeರಾಜ್ಯಸುದ್ದಿಜಾಲಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ರಾಮನಗರ:  7ನೇ ವೇತನ ಆಯೋಗ ಜಾರಿ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಸೇರಿದಂತೆ ಸರ್ಕಾರ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಿದೆ. ಈ ಸಂಬoಧ ಫೆ.27 ರಂದು ಬೆಂಗಳೂರಿನಲ್ಲಿ ಬೃಹತ್ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸಲಾಗುತ್ತದೆ ಎಂದು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ತಿಳಿಸಿದರು.

ಅವರು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಸರ್ಕಾರಿ ನೌಕರರರ ಸಂಘ ಕಚೇರಿಯಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಸರ್ಕಾರಿ ನೌಕರರ ಮಕ್ಕಳಿಗೆ ರಾಮನಗರ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸುವ ಬೃಹತ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಘೋಷಣೆ ಮಾಡುವ ಸಾಧ್ಯತೆ ಇದೆ. ಸರ್ಕಾರಿ ನೌಕರರ ಮಕ್ಕಳು ದೊಡ್ಡ ಹುದ್ದೆ ಪಡೆಯುವ ಸಂಬAಧ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಶೀಘ್ರದಲ್ಲಿ ಉಚಿತವಾಗಿ ಐಎಎಸ್ ಹಾಗೂ ಕೆಎಎಸ್ ತರಬೇತಿ ಕೇಂದ್ರವನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಹೆಚ್ಚಾಗಿರುತ್ತದೆ. ಮಕ್ಕಳು ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಕ್ಕೆ ಹೋದ ನಂತರ, ಸಾಕಿದ ಪೋಷಕರನ್ನು ಮರೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಉನ್ನತ ಸ್ಥಾನಕ್ಕೆ ತೆರಳಿದ ನಂತರ ಪೋಷಕರನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳಬೇಕು. ಇದರು ಸಮಾಜದಲ್ಲಿನ ಅನಾಥಾಶ್ರಮ ಕಡಿಮೆ ಮಾಡುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಹಾಗೂ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ಅವರು ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ರಾಮನಗರ ಜಿಲ್ಲೆಯ 115 ವಿದ್ಯಾರ್ಥಿಗಳಿಗೆ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿನಿಸಿ, ಒಂದು ಸಾವಿರ ಪ್ರೋತ್ಸಾಹಧನ ಹಾಗೂ ನೆನಪಿನ ಕಾಣಿಕೆ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾದ ರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಖಜಾಂಚಿ ಡಾ. ಸಿದ್ದರಾಮಣ್ಣ, ಜಿಲ್ಲಾಸ್ಪತ್ರೆಯ ಶಸ್ತçಚಿಕಿತ್ಸಕಿ ಡಾ.ಪದ್ಮಾ, ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹ ರಾಜು, ರಾಮನಗರ ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರಾದ ಚಂದ್ರಶೇಖರ್, ಶಿವಲಿಂಗೇಗೌಡ, ಪ್ರಕಾಶ್, ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ, ಪ್ರಚಾರ ಸಮಿತಿ ಅದ್ಯಕ್ಷ ಸತೀಶ್ ಪಾದ್ರಹಳ್ಳಿ, ಹಿರಿಯ ಉಪಾಧ್ಯಕ್ಷ ಬೈರಪ್ಪ, ರ‍್ಯದರ್ಶಿ ರಾಜೇಗೌಡ, ಸಂಜಿವೇಗೌಡ, ರಂಗಪ್ಪ, ಚಂದ್ರಹಾಸ್ ಪ್ರದೀಪ್ ಇದ್ದರು.

              

RELATED ARTICLES
- Advertisment -
Google search engine

Most Popular