Monday, January 26, 2026
Google search engine

Homeರಾಜ್ಯಬಸ್ ನಿಲ್ದಾಣಗಳಲ್ಲಿ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ

ಬಸ್ ನಿಲ್ದಾಣಗಳಲ್ಲಿ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ

ಮನುಷ್ಯನ ಜೀವನಕ್ಕೆ ಮಾರಕವಾದ ಆರೋಗ್ಯಕರ ಜೀವನ ಶೈಲಿಗೆ ಮಾದಕ ವ್ಯಸನ ಅಡ್ಡಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಮಾದಕ ದ್ರವ್ಯವನ್ನು ಬಹುಮಟ್ಟಿಗೆ ಹತೋಟಿ ತಂದಂತಹ ಮಂಗಳೂರಿನ ಪೊಲೀಸ್ ಕಮಿಷನರ್ ಹಾಗೂ ಪೊಲೀಸ್ ಇಲಾಖೆ ಮಾದಕ ದ್ರವ್ಯ ಬಳಕೆಯ ವಿರುದ್ಧ ಸಮರ ಸಾರಿರುವುದರಿಂದ ನಮ್ಮ ಜಿಲ್ಲೆಯ ಸಾರ್ವಜನಿಕರು ಹೆಮ್ಮೆ ಪಡುವಂತಾಗಿದೆ. ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೀವನಕ್ಕೆ ಮಾರಕವಾದಂತಹ ಮಾದಕ ದ್ರವ್ಯದ ವಿರುದ್ಧ ಆಂದೋಲನವನ್ನು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘವು ಪೊಲೀಸ್ ಇಲಾಖೆ ಹಾಗೂ ರೋಶನಿ ನಿಲಯ ವಿದ್ಯಾ ಸಂಸ್ಥೆಯ ಅಪರಾಧಶಾಸ್ತ್ರ ವಿಭಾಗದ ಮುಖ್ಯಸ್ಧೆ ಸಾರಿಕ್ ಅಂಕಿತ ಹಾಗೂ ಅವರ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಾರಂಭಗೊಂಡು ಲಾಲ್ ಬಾಗ್, ತೊಕ್ಕೊಟ್ಟು, ಉಳ್ಳಾಲ, ತಲಪಾಡಿ ಬಸ್ ನಿಲ್ದಾಣಗಳಲ್ಲಿ ಮಾದಕ ದ್ರವ್ಯ ವಿರುದ್ಧ ಜನ ಜಾಗೃತಿ (ಬೀದಿನಾಟಕ )ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಇದರ ಪ್ರಯುಕ್ತ ಎಲ್ಲಾ ಬಸ್ಸುಗಳಲ್ಲಿಯೂ ಮಾದಕ ದ್ರವ್ಯ ವಿರುದ್ಧ ಸ್ಟಿಕ್ಕರ್ ಹಾಕಿಕೊಂಡು ಜಿಲ್ಲೆಯ ಪ್ರಮುಖ ಕೇಂದ್ರಗಳಲ್ಲಿ ಫ್ಕೆಕ್ಸ್ ಹಾಕಿ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘವು ಕಾರ್ಯಕ್ರಮವನ್ನು ಸಂಯೋಜಿಸಿದೆ. ಈ ಕಾರ್ಯಕ್ರಮವು ಜನವರಿ 28ರ ಬುಧವಾರದಂದು ಬೆಳಿಗ್ಗೆ 11ಕ್ಕೆ ಮಂಗಳೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಮಂಗಳೂರು ನಗರದ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಆರ್ ಟಿ ಓ ಅಧಿಕಾರಿಗಳು, DCP ಯವರು, ACP ಯವರು ಸೇರಿದಂತೆ ಇತರ ಅಧಿಕಾರಿಗಳು ಬರಲಿದ್ದಾರೆ ಎಂದು ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹಾಗೂ
ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular