ಮೈಸೂರು: ‘ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ, ಆಯುರ್ವೇದ ಆಹಾರ ಕ್ರಮಗಳು ಪ್ರಸ್ತುತ ದಿನಗಳಲ್ಲಿ ಅಗತ್ಯವಾಗಿವೆ’ ಎಂದು ಆಯುರ್ವೇದ ಹಿರಿಯ ವೈದ್ಯರಾದ ಡಾ. ಚಂದ್ರಶೇಖರ್ ಹೇಳಿದರು.
ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನು ವಿತರಿಸಿ ನಂತರ ಆಯುರ್ವೇದದಿಂದ ಆಗುವ ಉಪಯೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು
ಆಯುರ್ವೇದ ವೈದ್ಯ ಪದ್ಧತಿ ಕಾಯಿಲೆ ಗುಣಪಡಿಸುವ ಜತೆಗೆ ಆರೋಗ್ಯಯುತ ಜೀವನ ನಡೆಸುವ ಕ್ರಮವನ್ನು ಕಲಿಸುತ್ತದೆ’ ಎಂದರು.
‘ಆಯುರ್ವೇದದ ಬಗ್ಗೆ ಜನರಿಗೆ ತಿಳಿವಳಿಕೆ ಬರಲು ಹೆಚ್ಚಿನ ಪ್ರಚಾರದ ಅಗತ್ಯ ಇದೆ’ ಎಂದರು. ನಂತರ ಮಾತನಾಡಿದ ಮಾಜಿ ಮೂಡ ಅಧ್ಯಕ್ಷ ಯಶಸ್ವಿ ಸೋಮಶೇಖರ್ ಆರೋಗ್ಯಕ್ಕಾಗಿ ಆಸ್ಪತ್ರೆಗಳನ್ನು ಅವಲಂಬಿಸಬಾರದು. ಅಡುಗೆ ಮನೆಯ ಸಾಂಬಾರ ಬಟ್ಟಲಿನಲ್ಲಿ ಆರೋಗ್ಯ ಕಾಯುವ ಪದಾರ್ಥಗಳಿರುತ್ತವೆ. ಅವುಗಳ ಸರಿಯಾದ ಸೇವನೆಯ ಮಹತ್ವ ಅರಿಯಬೇಕು’ ಎಂದರು
ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್ ಮಾತನಾಡಿ ಮಾತನಾಡಿ, ಆಯುರ್ವೇದ ಸಸ್ಯಗಳ ಬಳಕೆ ಮೂಲಕ ದೀರ್ಘಾವಧಿ ಕಾಯಿಲೆಗಳಿಗೆ ತುತ್ತಾಗುವುದನ್ನು ತಡೆಯ ಬಹುದು. ಹೀಗಾಗಿ ಜನಸಾಮಾನ್ಯರಿಗೆ ದಿನ ನಿತ್ಯ ಉಪಯೋಗಕ್ಕೆ ಬರುವ ಗಿಡಮೂಲಿಕೆ ಗಳ ಬಗ್ಗೆ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಕಾರ್ಯಕ್ರಮಗಳು ಅಗತ್ಯ ಎಂದು ತಿಳಿಸಿದರು.
ಆಯುರ್ವೇದ ಸಸ್ಯಗಳಾದ ಅಮೃತ ಬಳ್ಳಿ, ಕೃಷ್ಣ ತುಳಸಿ, ರಾಮ ತುಳಸಿ, ಬೆಟ್ಟದ ನೆಲ್ಲಿಕಾಯಿ, ದೊಡ್ಡಿಪತ್ರೆ, ಅಗಸೆ ಗಿಡ, ನೇರಳೆ ಗಿಡ, ಬೇವಿನ ಗಿಡ, ಅರಿಶಿನ ಗಿಡ ಸೇರಿದಂತೆ ಇನ್ನಿತರ ಗಿಡ ಗಳನ್ನು ವಿತರಣೆ ಮಾಡಲಾಯಿತು.
ಇದೆ ಸಂದರ್ಭದಲ್ಲಿ ಆಯುರ್ವೇದ ಹಿರಿಯ ವೈದ್ಯರಾದ ಡಾಕ್ಟರ್ ಚಂದ್ರಶೇಖರ್, ಮೂಡ ಮಾಜಿ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್, ಮಾಜಿನಗರ ಪಾಲಿಕಾ ಸದಸ್ಯರಾದ ಮಾ ವಿ ರಾಮ್ ಪ್ರಸಾದ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಜಗದೀಶ್, ಅಲೋಕ್ ಆರ್ ಜೈನ್, ಅಜಯ್ ಶಾಸ್ತ್ರಿ, ಸಂದೀಪ್, ಚಕ್ರಪಾಣಿ, ಸಚಿಂದ್ರ, ಆದರ್ಶ್, ಮಹಾನ್ ಶ್ರೇಯಸ್, ಶಿವಲಿಂಗ ಸ್ವಾಮಿ, ಹಾಗೂ ಇನ್ನಿತರರು ಹಾಜರಿದ್ದರು.