ಮೈಸೂರು: ಪಡುವಾರಳ್ಳಿಯಲ್ಲಿರುವ ಡಾ, ಬಾಬು ಜಗಜೀವನರಾಂ ಭವನದಲ್ಲಿ ನಡೆದ ಸಭೆಯಲ್ಲಿ ಮೈಸೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿದ್ದ ಬಿ.ರಂಗೇಗೌಡರಿಗೆ ಜಂಟಿ ನಿರ್ದೇಶಕರಾಗಿ ಬಡ್ತಿ ಹೊಂದಿದ್ದರಿಂದ ಅವರನ್ನು ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ.ಮುನಿರಾಜು, ಬಿ.ಸಿ.ಎಂ ಇಲಾಖೆಯಿಂದ ಜಿಲ್ಲಾ ಅಧಿಕಾರಿ ರಾಘವೇಂದ್ರ ಅಭಿನಂದಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕಲ್ಯಾಣಾಧಿಕಾರಿಗಳಾದ ಸಿದ್ದಲಿಂಗು, ರಾಮಸ್ವಾಮಿ, ನಾರಾಯಣಸ್ವಾಮಿ, ಭೀಮರಾವ್, ಚಂದ್ರಶೇಖರ್, ಅಶೋಕ್, ವೆಂಕಟರಾಜು, ಮುರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರು ನಿಲಯಪಾಲಕರು ಹಾಗೂ ಕಛೇರಿ ಸಿಬ್ಬಂದಿ ಹಾಜರಿದ್ದರು.