ಬಳ್ಳಾರಿ : ವಾಲ್ಮೀಕಿ ನಿಗಮದಲ್ಲಿ ನೆಡೆದ ೧೮೭ ಕೋಟಿ ರೂಪಾಯಿಗಳ ಹಗರಣ ತನಿಖೆಯೆನ್ನು ಸಿ.ಬಿ.ಐಗೆ ವಹಿಸಲು ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಚಿವ ಬಿ.ಶ್ರೀರಾಮಲು ಹಾಗೂ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಶ್ರೀರಾಮಲು ಹಾಗೂ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ನೆಡೆದ ೧೮೭ ಕೋಟಿ ರೂಪಾಯಿಗಳ ಹಗರಣ ತನಿಖೆಯೆನ್ನು ಸಿ.ಬಿ.ಐಗೆ ವಹಿಸಲು ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಲಾಗುತ್ತಿತ್ತು.